160 x 600 AD PLACEMENT
160 x 600 AD PLACEMENT
930 x 180 AD PLACEMENT

ಸಿದ್ದರಾಮಯ್ಯ ವಿರುದ್ಧವೇ ಫೇಕ್‌ ನ್ಯೂಸ್‌..!

750 x 100 AD PLACEMENT

ಇತ್ತೀಚಿನ ದಿನಗಳಲ್ಲಿ ಜನಸಾಮಾನ್ಯರಿಂದ ಹಿಡಿದು ಗಣ್ಯರಿಗೂ..ಫೇಕ್‌ ನ್ಯೂಸ್‌ ಕಾಟ ಹೆಚ್ಚಾಗುತ್ತಿದೆ. ಈಗ ಮುಖ್ಯಮಂತ್ರಿ ಸಿದ್ದರಾಮಯ್ಯಗೂ ನಕಲಿ ಸುದ್ದಿ ಕಾಟ ಶುರುವಾಗಿದೆ. ನಮಗೆ ಹಿಂದೂಗಳ ಮತ ಬೇಕಿಲ್ಲ, ಮುಸ್ಲಿಂರ ವೋಟ್‌ ಮಾತ್ರ ಸಾಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ ಅಂತ ಸುದ್ದಿ ಹರಿಬಿಡಿಯಲಾಗಿದೆ. ಇದರಿಂದ ಕುಪಿತಗೊಂಡಿರುವ ಸಿಎಂ ಸಿದ್ದರಾಮಯ್ಯ ಸ್ವತಃ ಫ್ಯಾಕ್ಟ್‌ ಚೆಕ್‌ ಮಾಡಿ, ಸುಳ್ಳು ಸುದ್ದಿಯನ್ನ ಬಯಲಿಗೆಳೆದಿದ್ದಾರೆ.ಇದೇ ವಿಚಾರವಾಗಿ ಪೋಸ್ಟ್‌ ಮಾಡಿರುವ ಸಿಎಂ ಸಿದ್ದರಾಮಯ್ಯ, ಬಿಜೆಪಿ ಷಡ್ಯಂತ್ರ ಅಂತ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ – ಜೆಡಿಎಸ್‌ ಮಿತ್ರಮಂಡಳಿ ಕೃಪಾಪೋಷಿತ ಕಿಡಿಗೇಡಿಗಳು ವಾರ್ತಾಪತ್ರಿಕೆಯನ್ನು ಹೋಲುವ ಸುಳ್ಳು ಸುದ್ದಿಯ ತುಣುಕೊಂದನ್ನು ಸೃಷ್ಟಿಸಿ, ಅದರಲ್ಲಿ ಜನರ ಕೋಮುಭಾವನೆ ಕೆರಳಿಸುವ ಸುದ್ದಿಯನ್ನು ತುಂಬಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಈ ಬಗ್ಗೆ ಈಗಾಗಲೇ ನಾನು ಪೊಲೀಸ್‌ ಇಲಾಖೆಗೆ ದೂರು ನೀಡಿದ್ದೇನೆ. ಇದರ ಹಿಂದಿರುವ ದುಷ್ಟ ಶಕ್ತಿ ಯಾರು ಎಂಬ ಬಗ್ಗೆ ನಮಗೆ ಮಾಹಿತಿ ಇದ್ದು, ಆದಷ್ಟು ಬೇಗನೆ ಅವರನ್ನು ನ್ಯಾಯದ ಕೈಗಳಿಗೆ ಒಪ್ಪಿಸಲಾಗುವುದು.

ರಾಜಕೀಯ ವಿರೋಧಿಗಳನ್ನು ನ್ಯಾಯಸಮ್ಮತ ರೀತಿಯಲ್ಲಿ ಎದುರಿಸಲಾಗದೆ ಇಂತಹ ಅಡ್ಡದಾರಿ ಮೂಲಕ ಚುನಾವಣೆ ಗೆಲ್ಲಲು ಹೊರಟಿರುವುದು ಬಿಜೆಪಿ ಮತ್ತು ಜೆಡಿಎಸ್‌ನ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ. ಹತ್ತು ವರ್ಷಗಳ ಕಾಲ ದೇಶದ ಆಡಳಿತ ನಡೆಸಿದ ಪಕ್ಷವೊಂದು ಚುನಾವಣೆ ಗೆಲ್ಲಲು ಸುಳ್ಳು ಸುದ್ದಿಯ ಮೊರೆ ಹೋಗುವಂತಹ ಹೀನಾಯ ಸ್ಥಿತಿಗೆ ತಲುಪಬಾರದಿತ್ತು.

ಸುಳ್ಳು ಸುದ್ದಿಗಳನ್ನು ನಂಬಿ ಶೇರ್‌ ಮಾಡುವ ಮುನ್ನ ಎಚ್ಚರಿಕೆ ವಹಿಸಿ….!! – CM

ಸುಳ್ಳು ಸುದ್ದಿಯ ಸೃಷ್ಟಿಕರ್ತರು, ಅವರ ಬೆನ್ನ ಹಿಂದೆ ಬೆಂಬಲಕ್ಕೆ ನಿಂತಿರುವವರು ಹೀಗೆ ಫೇಕ್‌ ಫ್ಯಾಕ್ಟರಿಯನ್ನು ಕಾನೂನಿನ ಮೂಲಕ ಬೇರು ಸಹಿತ ಕಿತ್ತೆಸೆಯುತ್ತೇವೆ ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಂಡಾಮಂಡಲರಾಗಿದ್ದಾರೆ.

750 x 100 AD PLACEMENT

750 x 100 AD PLACEMENT

Leave a Reply

Your email address will not be published. Required fields are marked *

You might also like
930 x 180 AD PLACEMENT
Lorem Ipsum Dolor Amet?

Lorem ipsum dolor sit amet, consectetur adipisicing elit, sed do eiusmod tempor

Promo Jangan Tampilkan Lagi Ya, Saya Mau !