160 x 600 AD PLACEMENT
160 x 600 AD PLACEMENT
930 x 180 AD PLACEMENT

ನಾನು ಒಂದೇ ಒಂದು ರೂಪಾಯಿ ಲಂಚ ಯಾರಿಂದಲೂ ಪಡೆದಿಲ್ಲ : ಡಿಸಿಎಂ

750 x 100 AD PLACEMENT

   ನಮ್ಮ ಜನ ನಮಗೆ ಬಹಳ ಪ್ರೀತಿ ವಿಶ್ವಾಸ ತೋರಿದ್ದಾರೆ. ಅವರ ಆಶೀರ್ವಾದದಿಂದ ಇಡೀ ರಾಜ್ಯದ ಜನಸೇವೆಯನ್ನು ಮಾಡುವ ಅವಕಾಶ ಸಿಕ್ಕಿದೆ. ಇಡೀ ಊರಿಗೆ ಊರೇ ಒಗ್ಗಟ್ಟಿನಿಂದ ಆಶೀರ್ವಾದ ಮಾಡುತ್ತಿದೆ. ಜನರಿಗೆ ನನ್ನ ಮೇಲೆ ನಂಬಿಕೆ ಇದ್ದು ಕ್ಷೇತ್ರ ಹಿಂದೆ ಹೇಗಿತ್ತು. ಈಗ ಯಾವ ರೀತಿ ಬದಲಾವಣೆ ಮಾಡಿದ್ದೇವೆ ಎಂದು ನಮ್ಮ ಜನರಿಗೆ ಗೊತ್ತಿದೆ.

   ಅನೇಕ ಕಡೆಗಳಲ್ಲಿ ನಮ್ಮ ಆಸ್ತಿಗಳನ್ನು ಮಕ್ಕಳ ವಿದ್ಯಾಭ್ಯಾಸದ ದೃಷ್ಟಿಯಿಂದ ದಾನ ಮಾಡುವ ಮೂಲಕ ಬಿಟ್ಟುಕೊಟ್ಟಿದ್ದೇವೆ. ನಾವು ಸ್ವಾರ್ಥಕ್ಕಾಗಿ ರಾಜಕಾರಣ ಮಾಡುತ್ತಿಲ್ಲ ಎಂಬುದು ತಾಲೂಕಿನ ಜನರಿಗೆ ತಿಳಿದಿದೆ. ಬಿಜೆಪಿಯವರಾಗಲಿ, ಕುಮಾರಸ್ವಾಮಿ ಅವರಾಗಲಿ ಅವರ ಊರುಗಳಲ್ಲಿ ಇಂತಹ ಕೆಲಸ ಮಾಡಿದ್ದಾರಾ? ನಾವು ನಮ್ಮ ದೇಹ ಇರುವುದೇ ಜನರಿಗಾಗಿ. ನಾವು ಜನರಿಗಾಗಿ ಪ್ರಾಣ ಕೊಡುವುದಕ್ಕೂ ಸಿದ್ಧವಿದ್ದೇವೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು. 

   ಇದೇ ವೇಳೆ ಮಂಡ್ಯ ಕ್ಷೇತ್ರದ ಬಿಜೆಪಿ-ಜೆಡಿಎಸ್ ಅಭ್ಯರ್ಥಿ ಎಚ್ ಡಿ ಕುಮಾರಸ್ವಾಮಿ ವಿರುದ್ಧವೂ ಕಿಡಿಕಾರಿದ ಡಿಕೆ ಶಿವಕುಮಾರ್, ‘ಐದು ವರ್ಷಕ್ಕೊಮ್ಮೆ ದೇವೇಗೌಡ ಮತ್ತು ಕುಮಾರಸ್ವಾಮಿಯವರು ಕನಕಪುರದಲ್ಲಿ ಪ್ರವಾಸ ಮಾಡಿ ಹೋಗ್ತಾರೆ.

750 x 100 AD PLACEMENT

   ಅವರು ಎಷ್ಟು ಸಾರಿ ಬೇಕಾದರು ಬಂದು ಹೋಗಲಿ ನನ್ನದೇನು ಅಭ್ಯಂತರವಿಲ್ಲ. ನಾವು ಮಾತ್ರ ಅವರಂತಲ್ಲ. ಈ ತಾಲೂಕಿನ ಜನರ ಮಕ್ಕಳಾಗಿರುವ ನಮ್ಮ ಬದುಕು, ಜೀವನ, ಪಲ್ಲಕ್ಕಿ, ಕೊನೆಗೆ ಹೆಣ ಎಲ್ಲವೂ ಇದೇ ಮಣ್ಣಿನಲ್ಲಿ ಅಡಗಿದೆ. ಐದು ವರ್ಷಗಳ ಹಿಂದೆ ಹಲವು ನಾಯಕರ ವಿರೋಧದ ನಡುವೆಯೂ ಕುಮಾರಸ್ವಾಮಿಯನ್ನು ಮುಖ್ಯಮಂತ್ರಿ ಮಾಡಿದೆವು.

   ನಾನು ಅವರ ಬೆನ್ನಿಗೆ ಚೂರಿಯನ್ನು ಹಾಕಿದ್ದೇನಂತೆ, ನಾನು ಕಲ್ಲು ಹೊಡೆದು ಲೂಟಿ ಮಾಡಿದ್ದೇನಂತೆ. ನನ್ನ 16 ಎಕರೆ ಜಮೀನಿನಲ್ಲಿ ಕಲ್ಲು ಹೊಡೆದಿದ್ದೇನೆಯೇ ಹೊರತು ಬೇರೆಯವರ ಅಥವಾ ಸರ್ಕಾರಿ ಜಮೀನಿನಲ್ಲಿ ಕಲ್ಲು ಹೊಡೆದಿಲ್ಲ. ಒಂದೇ ಒಂದು ರುಪಾಯಿ ಲಂಚ ಯಾರಿಂದಲೂ ಪಡೆದಿಲ್ಲ. ಯಾರು ಏನು ಬೇಕಾದರೂ ಮಾತನಾಡಲಿ, ನೀವು ನನ್ನ ಬೆಂಬಲಕ್ಕೆ ಇದ್ದರೆ ಸಾಕು ಎಂದರು. 

750 x 100 AD PLACEMENT

750 x 100 AD PLACEMENT

Leave a Reply

Your email address will not be published. Required fields are marked *

You might also like
930 x 180 AD PLACEMENT
Lorem Ipsum Dolor Amet?

Lorem ipsum dolor sit amet, consectetur adipisicing elit, sed do eiusmod tempor

Promo Jangan Tampilkan Lagi Ya, Saya Mau !