160 x 600 AD PLACEMENT
160 x 600 AD PLACEMENT
930 x 180 AD PLACEMENT

ಶಿಶುಗಳಿಗೆ ತಾಯಿ ಹಾಲು ಕೊರತೆ: ಎದೆಹಾಲು ಮಾರಾಟ ಮಾಡಲು ಮುಂದಾದ ತಾಯಿ! ಎದೆಹಾಲು ಮಾರಾಟ ತಡೆಗೆ ಕಾಯ್ದೆ ಇದೆಯೇ?ಹೈಕೋರ್ಟ್

750 x 100 AD PLACEMENT

ಅಮೆರಿಕದಲ್ಲಿ ಮಹಿಳೆಯೊಬ್ಬರು ತಮ್ಮ 118 ಲೀಟರ್‌ ಎದೆಹಾಲು ಮಾರಾಟ ಮಾಡಲು ಮುಂದಾಗಿದ್ದಾರೆ. ಐರೋಪ್ಯ ರಾಷ್ಟ್ರಗಳಲ್ಲಿ ಶಿಶುಗಳಿಗೆ ತಾಯಿ ಎದೆಹಾಲಿನ ಕೊರತೆ ಉಂಟಾದ ಬೆನ್ನಲ್ಲೇ ಈ ಕ್ರಮಕ್ಕೆ ತಾಯಿಯೊಬ್ಬರು ಮುಂದಾಗಿದ್ದಾರೆ. ಮಹಿಳೆಯ ಈ ಕ್ರಮಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ

 

  • ಐರೋಪ್ಯ ರಾಷ್ಟ್ರಗಳಲ್ಲಿ ಶಿಶುಗಳಿಗೆ ತಾಯಿ ಕೊರತೆ ಹಿನ್ನೆಲೆ
  • ಎದೆಹಾಲು ಮಾರಾಟ ಮಾಡಲು ಮುಂದಾದ ಮಹಾತಾಯಿ
  • 118 ಲೀಟರ್ಎದೆಹಾಲು ಮಾರಾಟಕ್ಕೆ ಅಮೆರಿಕದ ತಾಯಿ ಮುಂದು

 

ವಾಷಿಂಗ್ಟನ್‌: ಐರೋಪ್ಯ ರಾಷ್ಟ್ರಗಳಲ್ಲಿ ಶಿಶುಗಳಿಗೆ ತಾಯಿ ಎದೆಹಾಲಿನ ಕೊರತೆ ಉಂಟಾದ ಬೆನ್ನಲ್ಲೇ ಅಮೆರಿಕದಲ್ಲಿ ಮಹಿಳೆಯೊಬ್ಬರು ತಮ್ಮ 118 ಲೀಟರ್‌ ಎದೆಹಾಲು ಮಾರಾಟ ಮಾಡಲು ಮುಂದಾಗಿದ್ದಾರೆ. ಉತಾಹ್‌ ನಿವಾಸಿಯಾದ ಅಲಿಸ್ಸಾ ಕಿಟ್ಟಿ ಅವರು ಎದೆಹಾಲು ಇಲ್ಲದ ಬಾಣಂತಿಯರಿಗೆ, ಪೌಷ್ಟಿಕಾಂಶದಿಂದ ಬಳಲುತ್ತಿರುವ ಶಿಶುಗಳ ನೆರವಿಗಾಗಿ ತಮ್ಮ ಎದೆಹಾಲನ್ನು ಸಂಗ್ರಹಿಸಿ ಮಾರಾಟ ಮಾಡಲು ತೀರ್ಮಾನಿಸಿದ್ದಾರೆ.

‘ನನ್ನ ಬಳಿ ಅಗತ್ಯಕ್ಕಿಂತ ಹೆಚ್ಚಿನ ಎದೆಹಾಲು ಇದೆ ಎಂಬುದು ಗೊತ್ತಾಗಿದೆ. ಹಾಗಾಗಿ, ಮೂರು ಫ್ರೀಜರ್‌ಗಳಲ್ಲಿ ಸುಮಾರು 4 ಸಾವಿರ ಔನ್ಸ್‌ (1 ಔನ್ಸ್‌ ಎಂದರೆ 30 ಮಿಲಿ ಲೀಟರ್‌) ಎದೆಹಾಲು ಸಂಗ್ರಹಿಸಿಟ್ಟಿದ್ದೇನೆ. ಎದೆಹಾಲು ಇಲ್ಲದ ಮಹಿಳೆಯರಿಗೆ ಹಾಲು ಮಾರಾಟ ಮಾಡಲು ತೀರ್ಮಾನಿಸಿದ್ದೇನೆ. ಒಂದು ಔನ್ಸ್‌ಗೆ ಒಂದು ಡಾಲರ್‌ (77.5 ರೂ.) ತೆಗೆದುಕೊಳ್ಳುತ್ತೇನೆ,” ಎಂದು ಮಾಧ್ಯಮ ಸಂಸ್ಥೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

750 x 100 AD PLACEMENT

ಎದೆಹಾಲು ಮಾರಾಟ ತಡೆಗೆ ಕಾಯ್ದೆ ಇದೆಯೇ?ಹೈಕೋರ್ಟ್‌

ತಾಯಿ ಎದೆ ಹಾಲನ್ನು ವಾಣಿಜ್ಯಕರಣ ಮಾಡುತ್ತಿರುವುದನ್ನು ನಿಲ್ಲಿಸಲು ಸರ್ಕಾರಕ್ಕೆ ಆದೇಶಿಸುವಂತೆ ಕೋರಿ ಬೆಂಗಳೂರಿನ ಮರಳಕುಂಟೆ ನಿವಾಸಿ ಮುನೇಗೌಡ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠವು ಅರ್ಜಿದಾರರ ಪರ ವಕೀಲ ಬಿ.ವಿಶ್ವೇಶ್ವರಯ್ಯ ಅವರಿಗೆ ಈ ಸೂಚನೆ ನೀಡಿತು.

ತಾಯಿ ಎದೆಹಾಲು ಸಂಗ್ರಹಣೆ ಹಾಗೂ ಮಾರಾಟ ತಡೆಯಲು ಯಾವುದಾದರೂ ಕಾನೂನು ಜಾರಿಯಲ್ಲಿದೆಯೇ ಎಂಬ ಬಗ್ಗೆ ಅಧ್ಯಯನ ನಡೆಸಿ ಮಾಹಿತಿ ನೀಡುವಂತೆ ಅರ್ಜಿದಾರ ಪರ ವಕೀಲರಿಗೆ ಹೈಕೋರ್ಟ್ ನಿರ್ದೇಶಿಸಿದೆ.

ತಾಯಿ ಎದೆ ಹಾಲನ್ನು ವಾಣಿಜ್ಯಕರಣ ಮಾಡುತ್ತಿರುವುದನ್ನು ನಿಲ್ಲಿಸಲು ಸರ್ಕಾರಕ್ಕೆ ಆದೇಶಿಸುವಂತೆ ಕೋರಿ ಬೆಂಗಳೂರಿನ ಮರಳಕುಂಟೆ ನಿವಾಸಿ ಮುನೇಗೌಡ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠವು ಅರ್ಜಿದಾರರ ಪರ ವಕೀಲ ಬಿ.ವಿಶ್ವೇಶ್ವರಯ್ಯ ಅವರಿಗೆ ಈ ಸೂಚನೆ ನೀಡಿತು. ವಿಚಾರಣೆ ವೇಳೆ ವಕೀಲ ಬಿ.ವಿಶ್ವೇಶ್ವರಯ್ಯ ಹಾಜರಾಗಿ, ಕೆಲ ಬಹುರಾಷ್ಟ್ರೀಯ ಕಂಪನಿಗಳು ತಾಯಿ ಎದೆ ಹಾಲು ವಾಣಿಜ್ಯಕರಣ ಮಾಡುತ್ತಿವೆ. ಅನೈತಿಕ ವಾಗಿರುವ ಈ ವ್ಯಾಪಾರವನ್ನು ತಡೆಯಬೇಕು.

750 x 100 AD PLACEMENT

ಆ ಸಂಬಂಧ ನಿರ್ದಿಷ್ಟ ಕಾನೂನು ರೂಪಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿದರು. ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಅದನ್ನು ತಡೆಯಲು ದೇಶ-ವಿದೇಶದಲ್ಲಿ ಯಾವುದಾದರೂ ಕಾನೂನುಗಳ ಇವೆಯೇ ಎಂದು ಪ್ರಶ್ನಿಸಿತು. ಅದಕ್ಕೆ ಉತ್ತರಿಸಿದ ವಕೀಲರು, ನಾನು ನಡೆಸಿದ ಅಧ್ಯಯನ ಪ್ರಕಾರ ಯಾವುದೇ ಕಾನೂನು ಇಲ್ಲ ಎಂದರು. ಇದಕ್ಕೆ ನ್ಯಾಯಪೀಠ ಪ್ರತಿಕ್ರಿಯಿಸಿ, ಕಾನೂನಿನ ಚೌಕ ಟ್ಟು ಇರಬೇಕಲ್ಲವೇ? ಇಲ್ಲವಾದರೆ ಕಾನೂನು ರೂಪಿಸುವಂತೆ ನಿರ್ದೇಶಿಸಲು ಪಿಐಎಲ್ ವ್ಯಾಪ್ತಿಯಲ್ಲಿ ಹೇಗೆ ಸಾಧ್ಯ ಎಂದು ಕೇಳಿತು.

750 x 100 AD PLACEMENT
You might also like
930 x 180 AD PLACEMENT
Lorem Ipsum Dolor Amet?

Lorem ipsum dolor sit amet, consectetur adipisicing elit, sed do eiusmod tempor

Promo Jangan Tampilkan Lagi Ya, Saya Mau !